

ಮೈಸೂರು: ನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಎಸ್.ಎ.ಮೋಹನ್‌ಕೃಷ್ಣ ಅವರು ತಮ್ಮ ಶೈಕ್ಷಣಿಕ ಸಾಧನೆಗಾಗಿ ನವದೆಹಲಿಯ ರಾಷ್ಟ್ರೀಯ ಸಾಧಕರ ಮಾನ್ಯತಾ ವೇದಿಕೆ ನೀಡುವ ರಾಷ್ಟ್ರೀಯ ಶೈಕ್ಷಣಿಕ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೋಧನೆ ಮತ್ತು ಸಂಶೋಧನೆಯಲ್ಲಿ ಅವರ ಕೊಡುಗೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮೋಹನ್‌ಕೃಷ್ಣ ಅವರು 150 ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದು, ಕೆಲ ಸಂಘ, ಸಂಸ್ಥೆಗಳಿಂದ ರಾಜ್ಯೋತ್ಸವ ಮತ್ತು ಆರ್ಯಭಟ್ಟ ಪ್ರಶಸ್ತಿ ಲಭಿಸಿದೆ.