ಮೌಲ್ಯಯುತ ಬದುಕು ಸಮಾಜಕ್ಕೆ ಕೊಡುಗೆ

ಮೌಲ್ಯಯುತ ಬದುಕು ಸಮಾಜಕ್ಕೆ ಕೊಡುಗೆ
Published on

 ಚನ್ನರಾಯಪಟ್ಟಣ : ಸಮಾಜಕ್ಕೆ ದೊಡ್ಡ ಶಕ್ತಿ ನೀಡಿದ ಮಹಾನ್ ಪುರುಷ ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಪಟ್ಟಣದ ತಾಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಪೂಜೆ ಸಲ್ಲಿಸಿ ಮಾತನಾಡಿದರು.

ಕೆಳ ವರ್ಗದ ಜನರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ನಿಂತು ನೊಂದ ಜನತೆಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬಿ ಉತ್ತಮ ಬದುಕು ಕಟ್ಟಿಕೊಳ್ಳಲು ನೆರವಾದ ಮಹಾನ್ ವ್ಯಕ್ತಿ ನಾರಾಯಣ ಗುರುಗಳು ಎಂದರು.

ಸಂವಿಧಾನದ ಆಶಯದಂತೆ ಡಾ.ಬಿ.ಆರ್.ಅಂಬೇಡ್ಕರ್‌ರಂತೆಯೇ ಸಾಮಾಜಿಕ ನ್ಯಾಯದಡಿ ಸರ್ವರಿಗೂ ಸಮಪಾಲು ಸಮಬಾಳು ಕಲ್ಪನೆಗಾಗಿ ಹೋರಾಟ ನಡೆಸಿದರು. ಇಂತಹವರ ಆದರ್ಶ ಹಾಗೂ ತತ್ವಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾಲ್ಕು ಮಂದಿಗೆ ಒಳ್ಳೇ ಕೆಲಸ ಮಾಡುವ ಭಾವನೆಗಳನ್ನು ರೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಪುರಸಭಾ ಅಧ್ಯಕ್ಷೆ ರಾಧಾ ಮಂಜುನಾಥ್, ಉಪಾಧ್ಯಕ್ಷ ಧರಣೇಶ್, ಗ್ರೇಡ್-2 ತಹಸೀಲ್ದಾರ್ ಮರಿಯಯ್ಯ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಜಗದೀಶ್, ಪುರಸಭಾ ಮಾಜಿ ಅಧ್ಯಕ್ಷ ಕೃಷ್ಣಪ್ಪ, ತಾಲೂಕು ಈಡಿಗ ಸಮಾಜದ ಅಧ್ಯಕ್ಷ ಸಿ.ಜಿ.ಮಂಜಪ್ಪ, ಮುಖಂಡ ಸಿ.ಎಸ್.ಹರ್ಷ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net