ಯಗಚಿ ಜಲಾಶಯ ಭರ್ತಿ

28blrp4
Published on

ಬೇಲೂರು: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪಟ್ಟಣ ಸಮೀಪದ ಯಗಚಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದ ಮೂರು ಕ್ರಸ್ಟ್‌ಗೇಟ್‌ಗಳಿಂದ ಗುರುವಾರ ರಾತ್ರಿ ನದಿಗೆ ನೀರು ಬಿಡಲಾಗಿದೆ.

ತಾಲೂಕಿನ ಮಲೆನಾಡು ಸೇರಿದಂತೆ ಯಗಚಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವು ಹೆಚ್ಚಿರುವ ಕಾರಣ ಜಲಾಶಯ ಸಂಪೂರ್ಣ ಭತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಗುರುವಾರ ರಾತ್ರಿ ಮೂರು ಕ್ರಸ್ಟ್‌ಗೇಟ್‌ಗಳ ಮೂಲಕ ನೀರನ್ನು ಯಗಚಿ ನದಿ ಹಾಗೂ ಎಡದಂಡೆ ನಾಲೆ ಮೂಲಕ ಹೊರ ಬಿಡಲಾಗುತಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net