

ವಿಜಯಪುರ: ವಿಜಯದಶಮಿ ಹಬ್ಬದ ಪ್ರಯುಕ್ತ ವಿಜಯಪುರ ನಗರ ಶಾಸಕ ಶ್ರೀ ಬಸನಗೌಡ ಪಾಟೀಲ ಯತ್ನಾಳ ಅವರ ಸಿಂದಗಿ ರಸ್ತೆಯ ತೋಟದ ಮನೆಯಲ್ಲಿ ನಾಳೆ ನಡೆಯಬೇಕಿದ್ದ ಸಾರ್ವಜನಿಕ ಬನ್ನಿ ಕೊಡುವ ಕಾರ್ಯಕ್ರಮ ರದ್ದಾಗಿದೆ. ಪ್ರತಿ ವರ್ಷ ನಡೆಯುತ್ತಿದ್ದ ಈ ಕಾರ್ಯಕ್ರಮವನ್ನು ಈ ಬಾರಿ ಕರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತ್ತು ಜಿಲ್ಲೆಯಲ್ಲಿ ಪ್ರವಾಹದ ಅತೀವೃಷ್ಠಿಯಿಂದಾಗಿ, ಸಾರ್ವಜನಿಕ ಬನ್ನಿ ಕೊಡುವದನ್ನು ರದ್ದುಗೊಳಿಸಲಾಗಿದೆ ಎಂದು ಶಾಸಕ ಯತ್ನಾಳ ತಿಳಿಸಿದ್ದಾರೆ. ನಾಳೆ ಹುಬ್ಬಳಿಯಲ್ಲಿ ತಮ್ಮ ಖಾಸಗಿ ಕಾರ್ಯಕ್ರಮವಿರುವದರಿಂದ, ಇಂದು ಸಂಜೆ ಹುಬ್ಬಳ್ಳಿಗೆ ತೆರಳಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಹಕರಿಸುವಂತೆ ಕೋರಿದ್ದಾರೆ.