

ಕೊಪ್ಪಳ: ಯಲಬುರ್ಗಾ ಪಟ್ಟಣದ ತಂಬಾಕು ಪದಾರ್ಥಗಳ ಮಾರಾಟ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ತಪಾಸಣಾ ತಂಡ ದಾಳಿ ಮಾಡಿ ಪ್ರಕರಣ ದಾಖಲಿಸಿದೆ.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಅಂಗವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಯಲಬುರ್ಗಾ ತಾಲೂಕಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಪೋಲಿಸ್ ಇಲಾಖೆ ಸಹಯೋಗದಲ್ಲಿ ಕೊಟ್ಪಾ-2003ರಡಿ ತಂಬಾಕು ಅಥವಾ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿ ಸೆಕ್ಷನ್ 4ರಡಿಯಲ್ಲಿ 11 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.