ಯಲ್ಲಮ್ಮನಗುಡ್ಡದಲ್ಲಿ ಸೌಲಭ್ಯ ಕಲ್ಪಿಸಿ

29-3
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಕಿರಣ ಜಾಧವ ಮನವಿ ಸಲ್ಲಿಸಿದರು. ಕಾಡಾ ಅಧ್ಯಕ್ಷ ಡಾ. ವಿ.ಐ.ಪಾಟೀಲ, ಸಿದಗೌಡ ಮೋದಗಿ ಇದ್ದರು.
Published on

ಬೆಳಗಾವಿ: ಸುಕ್ಷೇತ್ರ ಸವದತ್ತಿ ಯಲ್ಲಮ್ಮನ ದೇವಸ್ಥಾನದ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಬುಧವಾರ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ ಜಾಧವ ಅವರು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ಸೇರಿ ಅನೇಕ ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಇಲ್ಲಿ ಶುಚಿತ್ವ ಇಲ್ಲ. ಭಕ್ತರಿಗೆ ಮೂಲ ಸೌಕರ್ಯ ಕೊರತೆಯಿಂದ ಬೆಳಗಾವಿ ಜಿಲ್ಲೆಯ ಹೆಸರು ಕೆಡುವಂತಾಗಿದೆ. ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ, ಸವದತ್ತಿ ಯಲ್ಲಮ್ಮನ ಕ್ಷೇತ್ರಕ್ಕೆ ನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸವದತ್ತಿ ತಹಸೀಲ್ದಾರ್ ಅವರೊಂದಿಗೆ ಮಾತನಾಡಿ ಮೂಲ ಸೌಕರ್ಯ ಕಲ್ಪಿಸಲು ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು. ಕಾಡಾ ಅಧ್ಯಕ್ಷ ಡಾ. ವಿ.ಐ.ಪಾಟೀಲ, ಸಿದಗೌಡ ಮೋದಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net