

ಯಳಂದೂರು: ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು, ಬ್ಯಾಂಕ್‌ಗಳು ಸೇರಿದಂತೆ ಇತರೆಡೆ ಕನ್ನಡ ಬದಲು ಆಂಗ್ಲ ಸೇರಿದಂತೆ ಇತರೆ ಭಾಷೆಗಳ ನಾಮಫಲಕಗಳಿಗೆ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಇತ್ತೀಚೆಗೆ ಮಸಿ ಬಳಿಯುವ ಮೂಲಕ ಕನ್ನಡ ಭಾಷೆಯಲ್ಲಿರುವ ಫಲಕಗಳನ್ನು ಅಳವಡಿಸುವಂತೆ ಜಾಗೃತಿ ಮೂಡಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾಯಕರ್ತರು ಹಲವೆಡೆ ನಾಮಫಲಕಗಳಿಗೆ ಮಸಿ ಬಳಿದರು. ಸೇನೆಯ ಜಿಲ್ಲಾಧ್ಯಕ್ಷ ನವೀನ್‌ಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲೆಡೆ ಕನ್ನಡದಲ್ಲಿ ನಾಮಫಲಕಗಳನ್ನು ಕಡ್ಡಾಯವಾಗಿ ಹಾಕುವಂತೆ ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ಪ್ರತಿ ಅಂಗಡಿ, ಹೋಟೆಲ್, ಬ್ಯಾಂಕ್, ಉದ್ದಿಮೆ, ಕಾರ್ಖಾನೆಗಳ ಮಾಲೀಕರು, ವ್ಯವಸ್ಥಾಪಕರ ಜತೆ ಈ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಉಪಾಧ್ಯಕ್ಷ ಸಂಜಯ್, ನವೀನ್ ಯಳಂದೂರು ತಾಲೂಕಿನ ಸೇನೆಯ ಕಾರ್ಯಕರ್ತರು ಹಾಜರಿದ್ದರು.