

ಯಳಂದೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶನಿವಾರ ಕ್ರೀಡಾಕೂಟ ಆಯೋಜಿಸಲಾಗಿತ್ತು.
ವಾಲಿಬಾಲ್, ಗುಂಡು ಎಸೆತ, ತಟ್ಟೆ ಎಸೆತ, ಬಕೆಟ್ ಇನ್ ದಿ ಬಾಲ್, ಥ್ರೋಬಾಲ್ ಸೇರಿದಂತೆ ಅನೇಕ ಸ್ಪರ್ಧೆಗಳು ನಡೆದವು. ವಯೋಮಾನದ ಆಧಾರದ ಮೇಲೆ 4 ವಿಭಾಗಗಳನ್ನಾಗಿ ವಿಂಗಡಿಸಿ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ಚರ್ಚಾಸ್ಪರ್ಧೆ, ಪ್ರಬಂಧ, ಭಕ್ತಿ, ಭಾವಗೀತೆಗಳ ಗಾಯನ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕಾಂತರಾಜು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜು ಕೋಡಿಉಗನೆ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ.ಎಂ. ಮಂಜುನಾಥ್ ಇತರರಿದ್ದರು.