ಯಶಸ್ಸಿಗೆ ಪರಿಶ್ರಮ ಅಗತ್ಯ

2202KLB06
Published on

ಕಲಬುರಗಿ: ವಿದ್ಯಾಭ್ಯಾಸದೊಂದಿಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಪ್ರಯತ್ನಿಸಬೇಕು. ನಿರಂತರ ಅಧ್ಯಯನ, ಪರಿಶ್ರಮದ ಮೂಲಕ ಯಶಸ್ಸು ಸಾಧ್ಯ ಎಂಬುದನ್ನು ಅರಿಯಬೇಕು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಹೇಳಿದರು.
ಸಂಸ್ಥೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೀಳ್ಕೊಡುಗೆ, ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಥೆಯ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್, ಹೋಮಿಯೋಪಥಿ, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಅಧ್ಯಯನ ಮಾಡಿದ ಸಾವಿರಾರು ವಿದ್ಯಾಥರ್ಿಗಳು ಇಂದು ಉತ್ತಮ ಉದ್ಯೋಗದಲ್ಲಿದ್ದಾರೆ. ಇನ್ನೂ ಅನೇಕರು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಕೆಲಸ ಮಾಡಿ ಸೈ ಅನಿಸಿಕೊಂಡಿದ್ದಾರೆ. ಈ ಮೂಲಕ ನಮ್ಮ ಭಾಗ, ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಶ್ಲಾಘಿಸಿದರು.
ಅಧ್ಯಯನ ಜತೆಗೆ ಕಠಿಣ ಪರಿಶ್ರಮವೂ ಬೇಕು. ಇತ್ತೀಚಿನ ತಂತ್ರಜ್ಞಾನದ ಬಗ್ಗೆ ಆಳವಾದ ಜ್ಞಾನ ಹೊಂದಿರಬೇಕು. ಈ ಮೂಲಕ ಉತ್ತಮ ಸಂಸ್ಥೆಯಲ್ಲಿ ಉದ್ಯೋಗ ಪಡೆಯುವುದರ ಜತೆಗೆ ಹಂತ ಹಂತವಾಗಿ ಜ್ಞಾನದ ವಿಸ್ತಾರ ಹೆಚ್ಚಿಸಿಕೊಳ್ಳಬಹುದಾಗಿದೆ ಎಂದರು.
ಸಂಸ್ಥೆ ಉಪಾಧ್ಯಕ್ಷ ಡಾ.ಶಿವಾನಂದ ದೇವರಮನಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ.ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಎಲಿ, ಆಡಳಿತ ಮಂಡಳಿ ಸದಸ್ಯರಾದ ಕಾಲೇಜಿನ ಸಂಚಾಲಕ ಅರುಣಕುಮಾರ ಎಂ.ಪಾಟೀಲ್, ಸಂಸ್ಥೆ ಸದಸ್ಯ ಸತೀಶಚಂದ್ರ ಹಡಗಲಿಮಠ, ವಿದ್ಯಾರ್ಥಿ ಸಲಹೆಗಾರತಿ ಭಾಗೀರಥಿ ದೇವಣಿ, ಪ್ರಾಚಾರ್ಯ ಎನ್.ಜಿ.ಪಾಟೀಲ್, ಎಚ್ಕೆಇ ಮಹಿಳಾ ಪಿಯು ಕಾಲೇಜು ಪ್ರಾಚಾರ್ಯ ಡಾ.ಸುಜಾತಾ ಬಿರಾದಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net