ಯಾದಗಿರಿ ಎಸ್‌ಸಿ ಯುವಕನ ಕೊಲೆ

PHOTO-001--000003
Published on

ಚಿತ್ರದುರ್ಗ: ಯಾದಗಿರಿಯಲ್ಲಿ ನಡೆದ ಮಾದಿಗ ಸಮುದಾಯದ ಯುವಕ ರಾಕೇಶ್ ಹತ್ಯೆ ಖಂಡಿಸಿ ಬಿಜೆಪಿ ಎಸ್‌ಸಿ, ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಕಾರ‌್ಯಕರ್ತರು ರಾಜ್ಯಾದ್ಯಂತ ಸೋಮವಾರ ಸಂಜೆ ಮತ್ತು ಮಂಗಳವಾರ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭ ಟಿಸಲಿದೆ ಎಂದು ಎಂಎಲ್‌ಸಿ ಎನ್.ರವಿಕುಮಾರ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 8-9 ಆರೋಪಿತರು, ಭಾನುವಾರ ರಾತ್ರಿ 10 ಗಂಟೆಗೆ ರಾಕೇಶ್ ಮನೆಗೆ ನುಗ್ಗಿ ಹತ್ಯೆ ಮಾಡಿದ್ದಾರೆ. ಕೃತ್ಯದ ವಿರುದ್ಧ ಎಫ್‌ಐಆರ್ ದಾಖಲಿಸದ ಪೊಲೀಸರು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದರು. ವಿಳಂಬವಾಗಿ ಸೋಮವಾರ ಮಧ್ಯಾಹ್ನ ಪ್ರಕರಣ ದಾಖಲಿಸಲಾಗಿದ್ದರೂ ಹಲವು ಐಪಿಸಿ ಸೆಕ್ಷನ್‌ಗಳನ್ನು ಉದ್ದೇಶಪೂರ್ವಕವಾಗಿ ಕೈ ಬಿಟ್ಟಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಸಾಲು, ಸಾಲು ಹಲ್ಲೆ, ಕೊಲೆಯಂಥ ಕೃತ್ಯಗಳಾಗುತ್ತಿದ್ದರೂ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದರು.
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮಾತನಾಡಿ, ಕಳೆದ 3 ದಿನಗಳಲ್ಲಿ 8 ಜನರ ಕೊಲೆಯಾಗಿದ್ದು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕರಿಕರೆ ತಿಪ್ಪೇಸ್ವಾಮಿ, ಉಮೇಶ್ ಕಾರಜೋಳ, ಮೋಹನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net