

ಬಳ್ಳಾರಿ : ಕೊಟ್ಟೂರು ತಾಲೂಕಿನ ಅಂಬಳಿ ಗ್ರಾಮದ ನಿವಾಸಿ ನಿವೃತ್ತ ಮುಖ್ಯಗುರುಗಳಾದ ಯು. ಹಿರಿಯಪ್ಪ (76)ವಯೋಸಹಜ ಕಾಯಿಲೆಯಿಂದ ಸೋಮವಾರ ನಿಧನರಾದರು. ಇವರಿಗೆ ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಮಂಗಳವಾರ ಅಂಬಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸಿರುಗುಪ್ಪ ತಾಲೂಕಿನ ತಾಳೂರು ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಆರಂಭಿಸಿ, ಅಲ್ಲಿಯೇ ಮುಖ್ಯಗುರುಗಳಾಗಿ ಬಡ್ತಿ ಪಡೆದು ನಿವೃತ್ತಿ ಹೊಂದಿದ್ದರು. ಇವರ ನಿಧನಕ್ಕೆ ತಾಳೂರಿನ ಅಪಾರ ಶಿಷ್ಯ ಬಳಗ ಕಂಬನಿ ಮಿಡಿಯಿತು.