ಯುಎಪಿಎ ಕಾಯ್ದೆಯಡಿ ಡಿಕೆಶಿ ಬಂಧಿಸಿ; ಬಿಜೆಪಿ ಕಾರ್ಯಕರ್ತರ ಆಗ್ರಹ

SOR WEB
Published on

ಸೊರಬ: ಉಗ್ರರಿಗೆ ಬೆಂಬಲ ನೀಡಿ, ಅವರ ಪರ ಹೇಳಿಕೆ ನೀಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೆ ಯುಎಪಿಎ ಕಾಯ್ದೆಯಡಿ ಬಂಧಿಸಿ, ಶಾಸಕತ್ವ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಸಿದ ತಾಲೂಕು ಬಿಜೆಪಿ ಮಂಡಲದ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿರುವುದನ್ನು ವಿರೋಧಿಸಿದ ಕಾಂಗ್ರೆಸ್ ನಡೆಯನ್ನು ಖಂಡಿಸಿದರು.

ಕಾಂಗ್ರೆಸ್ ಪಕ್ಷದ ಹಿಂದು ವಿರೋಧಿ ನೀತಿಯನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಬಿಜೆಪಿ ಯಾರನ್ನೂ ಅವಮಾನ ಮಾಡದೆ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಓಲೈಸಿಲು ಸಮಾಜ ಹಾಗೂ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ. ದೇಶದ ಹಿತಕಾಯುವ ಬಗ್ಗೆ ಅವಲೋಕನ ಮಾಡುವ ಬೌದ್ಧಿಕ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಬಿಜೆಪಿ ತಾಲೂಕು ಮಂಡಲದ ಅಧ್ಯಕ್ಷ ಪ್ರಕಾಶ್ ತಲಾಕಾಲಕೊಪ್ಪ ಟೀಕಿಸಿದರು.

ಕಾಂಗ್ರೆಸ್ಸಿಗರ ದ್ವಿಮುಖ ನೀತಿಗೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಶಂಕಿತ ಉಗ್ರ ಶಾರೀಕ್‌ನನ್ನು ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದ ಪೊಲೀಸ್ ಮಹಾನಿದೇರ್ಶಕರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಉಗ್ರರ ಪರ ಇರುವುದು ದೇಶದ್ರೋಹದ ಚಟುವಟಿಕೆ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net