ಯುಕೆಪಿ ಸಲಹಾ ಸಮಿತಿ ರಚಿಸಿ

Form a UKP Advisory Committee
ಯಶವಂತರಾಯಗೌಡ ಪಾಟೀಲ
Published on

ಇಂಡಿ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ನೀರಾವರಿ ಸಲಹಾ ಸಮಿತಿ ರಚಿಸಿ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ.
ಪ್ರತಿವರ್ಷ ಜುಲೈ 15ಕ್ಕೆ ಕಾಲುವೆಗಳಿಗೆ ನೀರು ಹರಿಸುವ ಸಂಪ್ರದಾಯವಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಕಾಲುವೆಗಳಿಗೆ ಇಲ್ಲಿಯವರೆಗೆ ನೀರು ಹರಿಸಿರುವುದಿಲ್ಲ. ಪ್ರಸ್ತುತವಾಗಿ ಮಹಾರಾಷ್ಟ್ರ ಭಾಗದಲ್ಲಿ ಯಥೇಚ್ಛವಾಗಿ ಮಳೆ ಸುರಿಯುತ್ತಿದ್ದು, ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಆ ಕಾರಣಕ್ಕಾಗಿ ತುರ್ತಾಗಿ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಐಸಿಸಿ ರಚಿಸುವಂತೆ ಹಾಗೂ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮಾಡಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರನ್ನು ಈವರೆಗೆ ನೇಮಕಾತಿ ಮಾಡಿಲ್ಲ. ಹಾಗಾಗಿ ಕೂಡಲೇ ಸಲಹಾ ಸಮಿತಿ ರಚಿಸಲು ಶಾಸಕರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net