

ಬೀದರ್: ಜೈ ಭಾರತ ಮಾತಾ ಸೇವಾ ಸಮಿತಿ ವತಿಯಿಂದ ಇಲ್ಲಿನ ಶಿವನಗರದ ಟ್ರಾಫಿಕ್ ಸಿಗ್ನಲ್ ಪಕ್ಕದ ಸ್ಥಳದಲ್ಲಿ ಯುಗಾದಿ ಹೊಸ ವರ್ಷದ ಸಂಭ್ರಮಾಚರಣೆ ಏ. 13ರಂದು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10 ರಿಂದ ರಾತ್ರಿ 10ರವರೆಗೆ ವಿವಿಧ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಕರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲಿಸುವೆ ಜತೆಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಬಯಲು ಸ್ಥಳದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬ ಅತ್ಯಂತ ವಿಶಿಷ್ಟ ಹಾಗೂ ಮಹತ್ವದ್ದಾಗಿದೆ. ಭಾರತೀಯರಿಗೆ ಯುಗಾದಿಯೇ ನಿಜವಾದ ಹೊಸ ವರ್ಷ ಹೊರತು ಪಾಶ್ಚಾತ್ಯ ಸಂಸ್ಕೃತಿಯ ಜನವರಿ 1 ಅಲ್ಲ. ಈ ಸಂದೇಶ ಸಮಾಜಕ್ಕೆ ಸಾರುವ ನಿಟ್ಟಿನಲ್ಲಿ ಹಾಗೂ ಭಾರತದ ಶ್ರೇಷ್ಠ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಯುಗಾದಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜೈ ಭಾರತ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಸದ್ಗುರು ಶ್ರೀ ಹವಾ ಮಲ್ಲಿನಾಥ ಮಹಾರಾಜ (ನಿರಗುಡಿ ಮುತ್ತ್ಯಾ) ಅವರು ದಿನವಿಡೀ ಹಾಜರಿದ್ದು, ಭಕ್ತರಿಗೆ ದರ್ಶನ ನೀಡಲಿದ್ದಾರೆ. ಕೋವಿಡ್ ನಿಯಮ ಪಾಲಿಸುವ ಮೂಲಕ ಸಾರ್ವಜನಿಕರು ಪಾಲ್ಗೊಳ್ಳುವಂತೆ ಸಮಿತಿ ಪ್ರಕಟಣೆ ಕೋರಿದೆ.