ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

Published on

ಬೆಳಗಾವಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‌ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ಫೆ. 15, 2023 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10. ಗಂಟೆಯಿಂದ ಸಂಜೆ 5. ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ 0821-2515944/9964760090 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ.ಎಲ್.ಎನ್.ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net