ಯುಪಿಎಸ್ಸಿ ಪರೀಕ್ಷೆಗಳಿಗೆ ಉಚಿತ ತರಬೇತಿ

Training
Published on

ಕುಶಾಲನಗರ: ಲೋಕ ಸೇವಾ ಆಯೋಗದ ಪರೀಕ್ಷೆಗಳಾದ ಐಎಎಸ್, ಐಪಿಎಸ್ ಇತ್ಯಾದಿ ಪರೀಕ್ಷೆಗಳನ್ನು ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿಯಿಂದ ಉಚಿತ ತರಬೇತಿ, ಮಾರ್ಗದರ್ಶನ ಒದಗಿಸಲಾಗುತ್ತಿದೆ. ಪ್ರತಿಭಾವಂತ 25 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ ಎಂದು ಮಹಾಸಭಾದ ಜಿಲ್ಲಾ ನಿರ್ದೇಶಕ ಬಿ.ಆರ್.ನಾಗೇಂದ್ರಪ್ರಸಾದ್ ಹೇಳಿದರು.

2024ರಲ್ಲಿ ಲೋಕಸೇವಾ ಆಯೋಗದ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳು ಜೂ. 25ರೊಳಗೆ ಅರ್ಜಿ ಸಲ್ಲಿಸಬೇಕು. ಒಟ್ಟು 70 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸಿದವರಿಗೆ ಜುಲೈ 2ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಉತ್ತಮ ಅಂಕ ಪಡೆವ ಪ್ರತಿಭಾವಂತ 25 ವಿದ್ಯಾರ್ಥಿಗಳಿಗೆ ಊಟ, ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉಳಿದ 45 ವಿದ್ಯಾರ್ಥಿಗಳಿಗೆ ಕೇವಲ ರೂ.50 ಸಾವಿರದಂತೆ ಕಡಿಮೆ ಶುಲ್ಕ ನಿಗದಿ ಮಾಡಿದ್ದು, ಇವರಿಗೆ ಒಂದು ವರ್ಷಗಳ ಕಾಲ ವಸತಿ, ಊಟ ಹಾಗೂ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದರು.

ಉಚಿತ ತರಬೇತಿಗೆ ಸೇರಲು ಇಚ್ಛಿಸುವವರು ನಂ.16, ಶೇಷಾದ್ರಿ ರಸ್ತೆ, ಗಾಂಧಿನಗರ, ಬೆಂಗಳೂರು, ದೂ.080 8073499217 ಸಂಪರ್ಕಿಸಬಹುದು. ವೆಬ್‌ಸೈಟ್: ಣಣಠಿ://ಚಿಚಿಚಿಛಿಚಿಜಥಿ.ಛಿ ಗೆ ಭೇಟಿ ನೀಡಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಲ್.ಸತ್ಯನಾರಾಯಣ, ಕುಶಾಲನಗರ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಉದಯಕುಮಾರ್, ಕಾರ್ಯದರ್ಶಿ ಬಿ.ಎಲ್.ಉದಯಕುಮಾರ್, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮೀ ಶ್ರೀನಿವಾಸ್, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಪ್ರತಿಭಾ ರಾಘವೇಂದ್ರ, ಪ್ರವೀಣ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net