ಯುವ ಘಟಕ ಸಂಘಟನೆಗೆ ಒತ್ತು

bkt-15-2
ಬಾಗಲಕೋಟೆ ನಗರದ ಖಾಸಗಿ ಹೊಟೇಲನಲ್ಲಿ ನಡೆದ ಕಾಂಗ್ರೆಸ್ ಯುವ ಘಟಕದ ಸಭೆಯಲ್ಲಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ ಅವರನ್ನು ಸನ್ಮಾನಿಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ, ಉಸ್ತುವಾರಿ ಎನ್.ಎಚ್.ಭಂಡಾರಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ ಇತರರು ಇದ್ದರು.
Published on

ಬಾಗಲಕೋಟೆ: ಭವ್ಯ ಇತಿಹಾಸ ಹೊಂದಿರುವ ಕಾಂಗ್ರೆಸ್‌ವು ಜನರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಆಡಳಿತ ನೀಡುತ್ತದೆ. ಪಕ್ಷದ ಸಂಘಟನೆ ಚುರುಕುಗೊಳಿಸಲಾಗುತ್ತಿದೆ. ಮುಂಬರುವ ೨೦೨೮ ಚುನಾವಣೆಗೆ ಕಾಂಗ್ರೆಸ್ ಯುವ ಘಟಕವು ಸಿದ್ದತೆ ಆರಂಭಿಸಿದೆ ಎಂದು ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಽಕಾರಕ್ಕೆ ಬಂದು ಎರಡು ವರ್ಷದಲ್ಲಿ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಕೋಟ್ಯಂತರ ಜನರಿಗೆ ತಲುಪಿದೆ. ಅಲ್ಲದೆ ಅಭಿವೃದ್ಧಿ ಕಾರ್ಯಗಳಿಗೂ ಮನ್ನಣೆ ನೀಡಿದೆ ಎಂದರು.

ಮುಂಬರುವ ೨೦೨೮ರ ಚುನಾವಣೆಗೆ ಈಗಿನಿಂದಲೇ ಸಜ್ಜಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಅದರಲ್ಲೂ ಉತ್ತರ ಕರ್ನಾಟಕ ಭಾಗದಿಂದ ಪ್ರವಾಸ ಆರಂಭಿಸಿದ್ದು, ಬೀದರ್, ಕಲಬುರ್ಗಿ, ವಿಜಯಪುರ ಮೂಲಕ ಬಾಗಲಕೋಟೆ ಸೇರಿದಂತೆ ಹಂತ ಹಂತವಾಗಿ ಎಲ್ಲೆಡೆ ಭೇಟಿ ನೀಡಿ ಯುವಕರಲ್ಲಿ ಹುರುಪು, ಉತ್ಸಾಹ ತುಂಬಬೇಕಿದೆ. ಬೇರು ಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಸಬೇಕಿದೆ. ಬ್ಲಾಕ್, ವಿಧಾನಸಭೆ, ಜಿಲ್ಲೆ, ಸೇರಿದಂತೆ ರಾಜ್ಯಮಟ್ಟದ ಪದಾಽಕಾರಿಗಳು ಪ್ರತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಆಡಳಿತ ನಡೆಸಿ ೧೧ ವರ್ಷ ಪೂರೈಸಿದ್ದು ಕೆಲಸ ಕಾರ್ಯಗಳು ಶೂನ್ಯವಾಗಿವೆ. ಕೊಟ್ಟ ಮಾತಿನಂತೆ ಜನತೆಗೆ ಹೊಟ್ಟೆ ತುಂಬಿಸುವ ಕೆಲಸ ನಡೆದಿಲ್ಲ. ಯಾವುದೇ ಯೋಜನೆಗಳು ಫಲಾನುಭವಿಗಳ ಮನೆಗೆ ತಲುಪಿಲ್ಲ. ನೋಟ್‌ಬ್ಯಾನ್, ಜನಧನ್ ಹೀಗೆ ಜನತೆಗೆ ಹೊರೆಯಾಗುವ ಕೆಲಸಗಳನ್ನೇ ಕೇಂದ್ರ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು.

ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ, ವಿಜಯ ಮುಚಖಂಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net