ಯುವ ಜನಾಂಗ ದುಶ್ಚಟಗಳಿಂದ ದೂರವಿರಲಿ

24ark4
Published on

ಅರಕಲಗೂಡು: ಯುವ ಜನಾಂಗ ದುಶ್ಚಟಗಳಿಂದ ದೂರವುಳಿದರೆ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಮೊಗವೀರ್ ಸಲಹೆ ನೀಡಿದರು.

ತಾಲೂಕಿನ ಹೊನ್ನವಳ್ಳಿ ಹೇಮಾವತಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಸವಾ ವಲಯದ ಸೋಮನಹಳ್ಳಿ ಕಾರ್ಯಕ್ಷೇತ್ರದ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಲ್ಲಿ ಓದಿಗೆ ಹೆಚ್ಚಿನ ಮಹತ್ವ ನೀಡಬೇಕು. ದುಶ್ಚಟ ದುರಾಭ್ಯಾಸಗಳತ್ತ ಚಿತ್ತ ಹರಿಸದೆ ಉತ್ತಮ ನಡೆ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಧನಪಾಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಮಂಜುನಾಥ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಸ್ವಪ್ನಾ, ಸ್ವಾತಿ, ಸೇವಾ ಪ್ರತಿನಿಧಿ ಬೇಬಿ, ಅಶ್ವಿನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net