

ಚಿತ್ರದುರ್ಗ: ಹೊಳಲ್ಕೆರೆ ತಾಲೂಕು ಟಿ.ಎಮ್ಮಿಗನೂರಲ್ಲಿ ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಲು ಸಿದ್ಧವಾಗಿದ್ದ ಆರ್.ಟಿ.ರಂಗಸ್ವಾಮಿ ಎಂಬಾತನ ವಿರುದ್ಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇ.ಮಲ್ಲೇಶಪ್ಪ ಅವರು ನೀಡಿದ್ದ ದೂರನ್ನಾಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ತಿಳಿಸಿದ್ದಾರೆ.
=====