ಯುವಕರು ದೇಶದ ಏಳಿಗೆಗೆ ಶ್ರಮಿಸಲಿ

Manvi bjp blood donate
ಪೋತ್ನಾಳ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಬಿಜೆಪಿ ಯುವ ಮೋರ್ಚಾ ತಾಲೂಕು ಘಟಕದಿಂದ ರಕ್ತದಾನ ಶಿಬಿರ ನಡೆಯಿತು. ಮಾಜಿ ಸಂಸದ ಬಿ.ವಿ. ನಾಯಕ, ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ, ಗುರುಗೌಡ ಕಣ್ಣೂರು ಇತರರಿದ್ದರು.
Published on

ಮಾನ್ವಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ರಮಿಸುತ್ತಿದ್ದಾರೆ ಎಂದು ಮಾಜಿ ಸಂಸದ ಬಿ.ವಿ.ನಾಯಕ ಹೇಳಿದರು.

ಪ್ರಧಾನಿ ಮೋದಿ ಜನ್ಮದಿನ ನಿಮಿತ್ತ ಬಿಜೆಪಿ ಯುವ ಮೋರ್ಚಾ ತಾಲೂಕು ಘಟಕದಿಂದ ಪೋತ್ನಾಳ ಗ್ರಾಮದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ವಿವಿಧ ಕ್ಷೇತ್ರಗಳಲ್ಲಿ ಮುಂದಿದೆ. ಯುವಕರು ದೇಶದ ಏಳಿಗೆಗೆ ಶ್ರಮಿಸಬೇಕು. ಪಕ್ಷದ ಸಂಘಟನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು. 60ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.

ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಗುರುನಾಥ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ, ಮಾನ್ವಿ ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ, ಯುವ ಮೋರ್ಚಾ ಅಧ್ಯಕ್ಷ ರವಿಕುಮಾರ ಸಾಹುಕಾರ ಆಲ್ದಾಳ, ಮುಖಂಡರಾದ ಎಸ್.ತಿಮ್ಮಾರೆಡ್ಡಿ ಭೋಗಾವತಿ, ಕೊಟ್ರೇಶಪ್ಪ ಕೋರಿ, ಮಲ್ಲಿಕಾರ್ಜುನಗೌಡ ಪೋತ್ನಾಳ, ಜೆ.ಸುಧಾಕರ, ಉಮೇಶ ಸಜ್ಜನ್, ಶರಣಪ್ಪಗೌಡ ನಕ್ಕುಂದಿ, ಕೆ.ಎಸ್. ಕುಮಾರಸ್ವಾಮಿ, ವಿರೂಪಾಕ್ಷಿಗೌಡ ಪೋತ್ನಾಳ, ಮಲ್ಲಿಕಾರ್ಜುನಗೌಡ ಪೋತ್ನಾಳ, ಎಂ.ವೀರನಗೌಡ ವಕೀಲ, ಜಗದೀಶ ಓತೂರು, ಕೆ.ನಾಗಲಿಂಗಸ್ವಾಮಿ, ಗುರುಗೌಡ ಕಣ್ಣೂರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net