ಯುವಕವಿಗಳಿಂದ ಕವಿತೆಗಳ ಆಹ್ವಾನ

Published on

ಚಾಮರಾಜನಗರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ಕರ್ನಾಟಕ ಸಂಭ್ರಮ-50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು ಯುವಕವಿ ಗೋಷ್ಠಿಗಳನ್ನು ಆಯೋಜಿಸಲಾಗಿದೆ.

ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಅ.30 ರೊಳಗೆ ಕಳುಹಿಸಿಕೊಡಬೇಕು. ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಪಡೆದುಕೊಳ್ಳಬಹುದೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸಟ್ರೆಾರ್ ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net