ಯುವಜನ ಸ್ವಾವಲಂಭಿಗಳಾಗಿ ಬದುಕಲಿ

bkt-19-3
ಬಾಗಲಕೋಟೆ ನಗರದ ಬಿವಿವ ಸಂಘದ ಎಂ.ಬಿ.ಎ ಕಾಲೇಜಿನ ಸಭಾಭವನದಲ್ಲಿ ಬುಧವಾರ ಯುವಜನ ಸೇವಾ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮವನ್ನು ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಭಾರತೀಯ ಯುವ ಮೋರ್ಚಾದ ಹನಮಂತರಾಯ ಬಿರಾದಾರ, ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ಸುಷ್ಮಾ ಗವಳಿ, ಎನ್.ಎಸ್.ಎಸ್ ಜಿಲ್ಲಾ ನೋಡಲ್ ಅಧಿಕಾರಿ ಡಾ.ಮಾರುತಿ ಪಾತ್ರೋಟ, ಇದ್ದರು.
Published on

ಬಾಗಲಕೋಟೆ: ಯುವಕರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಭಿಗಳಾಗಿ ಬದುಕಬೇಕು ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.


ನಗರದ ಬಿವಿವ ಸಂಘದ ಎಂ.ಬಿ.ಎ ಕಾಲೇಜಿನ ಸಭಾಭವನದಲ್ಲಿ ಬುಧವಾರ ಯುವಜನ ಸೇವಾ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಕೇಂದ್ರ ಹಾಗೂ ರಾಜ್ಯ ಸರ್ಕಾರ ಯುವ ಜನತೆಗೆ ಸ್ವಾವಲಂಭಿಗಳಾಗಿ ಬದುಕಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು. ಭಾರತ ಸರ್ಕಾರ ಯುವಜನತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.


ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಮಾತನಾಡಿ, ಯುವಕರಿಗಾಗಿಯೇ ಇಲಾಖೆಯಲ್ಲಿ ಅನೇಕ ಕಾರ್ಯಕ್ರಮ ಇದ್ದು, ಪ್ರತಿಯೊಂದು ಕಾರ್ಯಕ್ರಮದ ಲಾಭವನ್ನು ಪಡೆದುಕೊಳ್ಳಬೇಕು. ಸ್ವಯಂ ಉದ್ಯೋಗಿಗಳಾಗಿ ಹೊರಹೊಮ್ಮಲು ಹೇಳಿದರು.

ಭಾರತೀಯ ಯುವ ಮೋರ್ಚಾದ ಹನಮಂತರಾಯ ಬಿರಾದಾರ ಸರ್ಕಾರದ ಕಾರ್ಯಕ್ರಮಗಳ ಕುರಿತು ಯುವಜನತೆಗೆ ಮಾಹಿತಿ ನೀಡಿದರು. ಪ್ರಾಸ್ತಾವಿಕವಾಗಿ ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ಸುಷ್ಮಾ ಗವಳಿ ಮಾತನಾಡಿದರು. ಎನ್.ಎಸ್.ಎಸ್ ಜಿಲ್ಲಾ ನೋಡಲ್ ಅಧಿಕಾರಿ ಡಾ.ಮಾರುತಿ ಪಾತ್ರೋಟ, ಸ್ವಾಗತಿಸಿದರು. ನೆಹರು ಕೇಂದ್ರದ ಲೆಕ್ಕ ಹಾಗೂ ಕಾರ್ಯಕ್ರಮ ಅಧಿಕಾರಿ ರಾಮರಾವ ಬಿರಾದಾರ ವಂದಿಸಿದರು.

ಬಾಕ್ಸ್..
ಈ ಸಂದರ್ಭದಲ್ಲಿ ಯುವ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಲಾಯಿತು. ವಿಜೇತರಾದವರಿಗೆ ರಾಜ್ಯ ಮಟ್ಟದ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಮಾಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಒಟ್ಟು ೩೫೦ ಯುವಜನ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net