

ಬೆಳಗಾವಿ:ಯುವಜನೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹೆಚ್.ಐ.ವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್‌ಐವಿ ಮತ್ತು ಏಡ್ಸ್ (ತಡೆ) ಕಾಯ್ದೆ 2017, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್‌ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸುವ ಸಲುವಾಗಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಮ್ಯಾರಥಾನ್ ಸ್ಪರ್ಧೆಯು ಸೆ.2, 2023 ರಂದು ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭವಾಗಿ ಕೊಲ್ಲಾಪೂರ ವೃತ್ತದ ಮಾರ್ಗವಾಗಿ ಚನ್ನಮ್ಮಾ ವೃತ್ತ ತಲುಪಿ, ಮರಳಿ ಅದೇ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣ ತಲುಪುವುದು ಎಂದು ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ.