

ಹಾಸನ: ಸಾರ್ವಜನಿಕ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊರ್ವ ಮಂಗಳವಾರ ರಾತ್ರಿ 7.30ರ ಸಮಯದಲ್ಲಿ ಮಾದಕ ವಸ್ತು ಸೇವಿಸಿ ರಸ್ತೆಯಲ್ಲಿ ನಡೆದು ಬರುತ್ತಿದ್ದ ಬಾಲಕಿ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ವಿರೋಧ ವ್ಯಕ್ತಪಡಿಸುತ್ತಿದ್ದನ್ನು ಗಮನಿಸಿದ ಸುತ್ತಮುತ್ತ ಅಂಗಡಿ ಮಾಲೀಕರು ಆತನನ್ನು ಹಿಡಿಯಲು ಮುಂದಾದಾಗ ಆತ ಪರಾರಿಯಾಗಿದ್ದಾನೆ.
ಘಟನೆ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, ಪಿಕ್ಚರ್ ಪ್ಯಾಲೇಸ್ ಪಕ್ಕದ ದ್ವಾರದ ರಸ್ತೆಯಲ್ಲಿ ಹುಡುಗಿಯೊಬ್ಬಳು ನಡೆದುಕೊಂಡು ಬರುವಾಗಿ ಮಾದಕವ್ಯಸನಿ ಒಬ್ಬ ಆಕೆಯ ಜತೆ ಅನುಚಿತವಾಗಿ ವರ್ತಿಸಲು ಆರಂಭಿಸಿದ. ಈ ವೇಳೆ ಸುತ್ತ ಮುತ್ತ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಆತನನ್ನು ಹಿಡಿಯಲು ಬಂದಾಗ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ಭಾಗದಲ್ಲಿ ಇಂತಹ ದುಷ್ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಕೂಡಲೇ ಪೊಲೀಸ್ ಇಲಾ ಎಚ್ಚೆತ್ತುಕೊಂಡು ಇಂತಹವರ ಮೇಲೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.