ಯುವನಿಧಿ ಯೋಜನೆ ಯಶಸ್ವಿ ಅನುಷ್ಠಾನಗೊಳಿಸಿ

10 (1)
Published on

ಬಾಗಲಕೋಟೆ: ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಸಮರ್ಪಕ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಯುವನಿಧಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಕುರಿತು ಜರುಗುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಪ್ರತಿ ಪದವಿ ಹಾಗೂ ಡಿಪ್ಲೋಮಾ ಕಾಲೇಜಿನಲ್ಲಿ ಜನವರಿ ೧, ೨೦೨೩ ರಿಂದ ಪಾಸಾದ ವಿದ್ಯಾರ್ಥಿಗಳು ಈ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ. ಅಂತ ವಿದ್ಯಾರ್ಥಿಗಳ ಮಾಹಿತಿಯನ್ನು ಕ್ರೂಢೀಕರಿಸಿ ಮಾಹಿತಿ ನೀಡಬೇಕು. ಅಂದಾಗ ಮಾತ್ರ ಅರ್ಹ ಅಭ್ಯರ್ಥಿಗಳ ಮಾಹಿತಿ ಲಭ್ಯವಾಗಲಿದೆ ಎಂದರು.

ಕಾಲೇಜು ಹಂತದಲ್ಲಿ ಅರ್ಹ ನಿರುದ್ಯೋಗಿಗಳ ಪಟ್ಟಿ ದೊರೆತಲ್ಲಿ ಅವರೆಲ್ಲರನ್ನು ಎನ್‌ಎಡಿ ಪೋರ್ಟಲ್‌ನಲ್ಲಿ ನೋಂದಣಿ ಮಾಡಲು ಅನುಕೂಲವಾಗುತ್ತದೆ. ನಿಮ್ಮ ಹಂತದಲ್ಲಿ ತಾಂತ್ರಿಕ ತೊಂದರೆಯಿಂದ ನೋಂದಣಿ ಆಗದಿದ್ದಲ್ಲಿ ಅವುಗಳ ಮಾಹಿತಿಯನ್ನು ನೀಡಿದಲ್ಲಿ ನೋಂದಣಿಗೆ ಕ್ರಮವಹಿಸಲಾಗುತ್ತದೆ. ಯುವನಿಽ ಯೋಜನೆಗೆ ಸರ್ಕಾರ ನಿಗದಿಪಡಿಸಿದ ಅರ್ಹತೆಗಳು ಹೊಂದಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಜಿಲ್ಲೆಯ ಪ್ರತಿಯೊಂದು ಕಾಲೇಜಿನ ಪ್ರಾಚಾರ್ಯರು ಎರಡು ದಿನಗಳ ಒಳಗಾಗಿ ಅರ್ಹ ಅಭ್ಯರ್ಥಿಗಳ ಮಾಹಿತಿ ನೀಡಿದಲ್ಲಿ ನೋಂದಣಿಗೆ ಕಾಲೇಜುವಾರು ಕ್ಯಾಂಪ್‌ಸಹ ಮಾಡಲಾಗುತ್ತದೆ. ಅಲ್ಲದೆ ಪ್ರತಿ ಕಾಲೇಜಿಗೆ ಓರ್ವ ನೋಡಲ್ ಅಽಕಾರಿಗಳನ್ನು ಸಹ ನೇಮಿಸಲಾಗುವುದು ಎಂದು ತಿಳಿಸಿದರು.

ಜಿಲ್ಲ್ಲೆಯಲ್ಲಿ ಈಗಾಗಲೇ ೨೮೦೨ ಜನ ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಒಟ್ಟು ಎಷ್ಟು ಜನ ಈ ಯೋಜನೆಗೆ ಒಳಪಡಲಿದ್ದಾರೆಂಬುದು ಮಾಹಿತಿ ಸಿಗಬೇಕಿದೆ. ಈ ನಿಟ್ಟಿನಲ್ಲಿ ಪ್ರಾಚಾರ್ಯರು ತಮ್ಮ ಕಾಲೇಜುವಾರು ೨೦೨೩ರಲ್ಲಿ ತೇರ್ಗಡೆಹೊಂದಿದ ಅರ್ಹ ನಿರುದ್ಯೋಗ ಅಭ್ಯರ್ಥಿಗಳ ಮಾಹಿತಿ ನೀಡಬೇಕು. ಅಂದಾಗ ಮಾತ್ರ ಈ ಪೈಕಿ ನೋಂದಣಿ ಎಷ್ಟು ಆಗಿದೆ. ಇನ್ನು ಎಷ್ಟು ಆಗಬೇಕೆಂಬುದು ಗೊತ್ತಾಗುತ್ತದೆ. ಇದರಿಂದ ನೂರಕ್ಕೆ ನೂರರಷ್ಟು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಗುರುಪಾದಯ್ಯ ಹಿರೇಮಠ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜಿನ ಪ್ರಾಚಾರ್ಯರು ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net