ಯುವನಿಧಿ ವಿಶೇಷ ನೋಂದಣಿ ಅಭಿಯಾನ

Published on

ಹುಬ್ಬಳ್ಳಿ: ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್​ನಲ್ಲಿ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಆರಂಭಿಸಲಾಗಿದೆ.

ಈ ಯೋಜನೆಯಡಿ ನೋಂದಣಿಯಾಗುವ ಸ್ನಾತಕ, ಸ್ನಾತಕೋತ್ತರ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ. 2023 ಮತ್ತು 2024ರಲ್ಲಿ ತೇರ್ಗಡೆಯಾದ ಸಂಸ್ಥೆಯ ವಿದ್ಯಾರ್ಥಿಗಳು ಡಿಪ್ಲೊಮಾ ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್​ಬುಕ್, ಪಡಿತರ ಚೀಟಿ ಹಾಗೂ ಆಧಾರ್ ಲಿಂಕ್ಡ್ ಇರುವ ಮೊಬೈಲ್ ಫೋನ್ ನಂಬರ್​ನೊಂದಿಗೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್​ಗೆ ಆಗಮಿಸಿ ನೋಂದಣಿ ಮಾಡಿಸಿ ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಾಚಾರ್ಯರು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net