ಯೂರಿಯಾ ಗೊಬ್ಬರ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

31sirsi1
Published on

ಶಿರಸಿ: ಕೃಷಿಕರಿಗೆ ಯೂರಿಯಾ ಗೊಬ್ಬರ ಪೂರೈಸಬೇಕು. ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಕೂಡಲೆ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕಿನ ದಾಸನಕೊಪ್ಪದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬನವಾಸಿ ಭಾಗದಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಸರಿಯಾಗಿ ಸಿಗುತ್ತಿಲ್ಲ. ತಕ್ಷಣ ಗೊಬ್ಬರ ಒದಗಿಸಬೇಕು. ಮಳೆಯಿಂದ ಹಾಳಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು. ರೈತರ ಕಂತಿನ ಸಾಲ ತುಂಬುವ ಅವಧಿ ಮುಂದೂಡಬೇಕು. ಲಾಕ್​ಡೌನ್ ಸಮಯದಲ್ಲಿ ಘೊಷಿಸಿದ ಪರಿಹಾರ ಹಣವನ್ನು ಆರ್​ಟಿಸಿಯಲ್ಲಿ ಬೆಳೆ ನೋಂದಣಿಯಾಗದಿದ್ದರೂ ಸ್ಥಳಕ್ಕೆ ಭೇಟಿ ನೀಡಿ ಜಮಾ ಮಾಡಬೇಕು. ಹಿಂದಿನ ಅವಧಿಯಲ್ಲಿ ವಿಮಾ ಕಂಪನಿಗಳು ಉಳಿಸಿಕೊಂಡ ಹಣವನ್ನು ರೈತರಿಗೆ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net