ಯೂರಿಯಾ, ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ

01M.D.R.3
Published on

ಮದ್ದೂರು: ತಾಲೂಕಿನೆಲ್ಲೆಡೆ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಯೂರಿಯಾ ಪೂರೈಕೆಗೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಶುಕ್ರವಾರ ಒಂದು ಕೋಟಿ ರೂ. ವೆಚ್ಚದ ಪರಿಶಿಷ್ಟ ಜಾತಿ ಕಾಲನಿಯ ಸಿ.ಸಿ.ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಜ್ಯಕ್ಕೆ ಅಗತ್ಯವಾಗಿ ಬೇಕಾಗಿರುವ ಯೂರಿಯಾವನ್ನು ನೀಡಬೇಕಾಗಿರುವ ಕೇಂದ್ರ ಸರ್ಕಾರವು ಈ ವಿಷಯದಲ್ಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಆದ್ದರಿಂದಾಗಿ ರಾಜ್ಯದ ಹಲವಾರು ಕಡೆಗಳಲ್ಲಿ ಯೂರಿಯಾ ರಸಗೊಬ್ಬರವನ್ನು ರೈತರಿಗೆ ವಿತರಿಸುವಲ್ಲಿ ತೊಂದರೆಯಾಗಿತ್ತು. ಆದರೆ ಸಮರ್ಪಕವಾಗಿ ಪೂರೈಸಲು ರಾಜ್ಯ ಸರ್ಕಾರವು ಮುಂದಾಗಿದ್ದು, ಅಂತೆಯೇ ತಾಲೂಕಿನಲ್ಲಿಯೂ ಎಲ್ಲ ಕಡೆ ುೂರಿಯಾ ರಸಗೊಬ್ಬರವು ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ವಿತರಿಸಲಾಗುತ್ತಿದೆ ಎಂದರು.

ತಾಲೂಕು ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಸಿಸಿ ಚರಂಡಿ ಹಾಗೂ ರಸ್ತೆ ನಿರ್ಮಾಣ ಮಾಡಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಅಂತೆಯೇ ಹುಲಿಕೆರೆ ಗ್ರಾಮದಲ್ಲಿ ಬಹಳ ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದಿರಲಿಲ್ಲ. ಅದನ್ನರಿತು ಈ ಗ್ರಾಮದಲ್ಲಿ ರಸ್ತೆ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕೆಲಸಗಳು ಆಗಲು ಗಮನ ನೀಡಲಾಗುತ್ತಿದೆ ಎಂದರು.

ಭಾರತಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮುಖಂಡರಾದ ಮಾದೇಶ್, ಮಹದೇವು, ಪುಟ್ಟಸ್ವಾಮಿ, ಹೊನ್ನಲಗೆರೆ ಸ್ವಾಮಿ, ಸಿದ್ದರಾಜು, ಬೋರಯ್ಯ, ಶ್ರೀನಿವಾಸ್‌ಗೌಡ, ಚಿದಂಬರಮೂರ್ತಿ, ಆಲೂರು ಕುಮಾರ್, ರಾಜೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net