

ಬೇಲೂರು: ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಶಾಸಕ ಎಚ್.ಕೆ.ಸುರೇಶ್ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ ಆಯೋಜಕರಿಂದ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.
ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, ಯೋಗ ದಿನಾಚರಣೆ ಅಂಗವಾಗಿ ಶ್ರೀ ಚನ್ನಕೇಶ್ವಸ್ವಾಮಿ ದೇವಾಲಯದ ಆವರಣದಲ್ಲಿ ಸಂಪೂರ್ಣ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರು, ಶಾಲಾ ಮಕ್ಕಳು ಪಾಲ್ಗೊಳ್ಳಬೇಕು. ಆಗಮಿಸುವ ಶಾಲಾ ಮಕ್ಕಳಿಗೆ ಉಪಹಾರ ಮತ್ತು ಕುಡಿಯುವ ನೀರು ಒದಗಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದರು.
ತಹಸೀಲ್ದಾರ್ ಎಂ.ಮಮತಾ, ದೇಗುಲದ ಇಒ ಯೋಗೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಕಾಟಪ್ಪ ಸಿಗ್ಗಾವಿ, ಆರೋಗ್ಯಾಧಿಕಾರಿ ಲೋಹಿತ್, ಯೋಗಪಟು ರಾಘವೇಂದ್ರ ಗುಪ್ತ ಇದ್ದರು.