ಯೋಗ ಸ್ಪರ್ಧೆಯಲ್ಲಿ ಸಾಧನೆ

2108-Kpl-Ravi-3
Published on

ಕೊಪ್ಪಳ:ಗಂಗಾವತಿಯಲ್ಲಿ ಭಾನುವಾರ ನಡೆದ ಕಲಬುರ್ಗಿ ವಿಭಾಗದ ಯೋಗ ಸ್ಪರ್ಧೆಯಲ್ಲಿ ಕಿಡದಾಳದ ಶ್ರೀ ಶಾರದಾ ಇಂಟರ್ನ್ಯಾಷನಲ್ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ತನ್ಮಯಿ ಪಾಟೀಲ್ ಸಬ್ ಜೂನಿಯರ್ ಗರ್ಲ್ಸ್ ವಿಭಾಗದ ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.


ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದ ಪಡೆದು ಚಿನ್ನ ಮತ್ತು ಬೆಳ್ಳಿ ಪದಕ ಪಡೆದುಕೊಂಡಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕಳೆದ ವರ್ಷದಲ್ಲಿ ಮೈಸೂರಿನಲ್ಲಿ ನಡೆದ ದಸರಾ ಯೋಗಾಸನ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿ ಆದಿಶೇಷ ಸಾಯಿ ಭಾಗವಹಿಸಿದ್ದ. ಸಂಸ್ಥೆಯ ಅಧ್ಯಕ್ಷ ವೀರನಗೌಡ ಪಾಟೀಲ್, ಕಾರ್ಯದರ್ಶಿ ಶರಣಗೌಡ ಪಾಟೀಲ್, ಕಾರ್ಯಕಾರಣಿ ನಿರ್ದೇಶಕ ಶಿವಪ್ರಕಾಶ ಎಂ., ಕಾರ್ಯನಿರ್ವಾಹಕ ನಿರ್ದೇಶಕ ಡಾ.ವಿಶ್ವನಾಥ ರೆಡ್ಡಿ, ಶಾಲೆಯ ಪ್ರಾಚಾರ್ಯರು, ಆಡಳಿತಾಧಿಕಾರಿ ಹರ್ಷ ವ್ಯಕ್ತಪಡಿಸಿದ್ದಾರೆ.


ಯೋಗವು ದೇಹ, ಮನಸ್ಸು ಮತ್ತು ಆತ್ಮ ನಿಯಂತ್ರಿಸಲು ಸಹಾಯ ಮಾಡುತ್ತದೆ. ದೇಹ ಮತ್ತು ಮನಸ್ಸನ್ನು ಶಾಂತಗೊಳಿಸಲು, ದೈಹಿಕ ಮತ್ತು ಮಾನಸಿಕ ಶಿಸ್ತಿನ ಸಮತೋಲನವನ್ನು ಸೃಷ್ಟಿಸುತ್ತದೆ. ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣವು ಮಕ್ಕಳ ಮನೋವಿಜ್ಞಾನದ ಬೆಳವಣಿಗೆಗೆ ಕಾರಣವಾಗುತ್ತದೆ. ಹೀಗಾಗಿ ಶಾರದಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಪಠ್ಯಕ್ರಮದ ಜತೆಗೆ ಪ್ರತಿ ಶನಿವಾರ ಯೋಗ ಕಲಿಕೆ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಶಾಲೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net