ಯೋಗಥಾನ್ ಮುಂದೂಡಿಕೆ

full
Published on

ಮೈಸೂರು: ಮೈಸೂರಿನ ರೇಸ್‌ಕೋರ್ಸ್‌ನಲ್ಲಿ ಸೆ.17ರಂದು ನಡೆಯಬೇಕಿದ್ದ ಯೋಗಾಥಾನ್-2022ರ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸಹಯೋಗದೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯೋಗಾಥಾನ್ ಮೂಲಕ ವಿಶ್ವ ಗಿನ್ನೆಸ್ ದಾಖಲೆ ನಿರ್ಮಿಸಲು ನಿರ್ಧರಿಸಲಾಗಿತ್ತು.

ಆದರೆ, ವಿಧಾನಮಂಡಲದ ಅಧಿವೇಶನ, ವಿಶ್ವವಿದ್ಯಾಲಯ, ಕಾಲೇಜುಗಳು ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭಗೊಂಡಿದೆ. ಜತೆಗೆ, ಮಳೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಸೂಚಿಸಿದ್ದಾರೆ. ಆದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net