ಯೋಗದಿಂದ ಮನಸ್ಸಿಗೆ ನೆಮ್ಮದಿ

CTD YOGA
Published on

ಚಿತ್ರದುರ್ಗ: ಪ್ರತಿಯೊಬ್ಬರ ನಿತ್ಯದ ಜೀವನ ಯೋಗಮಯವಾಗಿರಬೇಕೆಂದು ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ, ಯೋಗಗುರು ಭವರ್‌ಲಾಲ್ ಆರ್ಯ ಹೇಳಿದರು.
ಪತಂಜಲಿ ಯೋಗ ಸಮಿತಿ ಮತ್ತು ಭಾರತ ಸ್ವಾಭಿಮಾನಿ ಟ್ರಸ್ಟ್‌ನಿಂದ ಗುರುವಾರ ನಗರದ ವಾಸವಿ ಶಾಲೆಯಲ್ಲಿ ಆಯೋಜಿಸಿದ್ದ ಯೋಗ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಯೋಗದಿಂದ ಎಲ್ಲ ತರಹದ ನೋವು, ರೋಗಗಳು ನಿವಾರಣೆಯಾಗಿ ಮನಸ್ಸು ಸಮಾಧಾನದಿಂದ ಇರುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಗ ಶಿಕ್ಷಕರ ತರಬೇತಿ ಏರ್ಪಡಿಸಲಾಗುತ್ತಿದೆ ಎಂದರು.
ಭಾರತ ಸ್ವಾಭಿಮಾನಿ ಟ್ರಸ್ಟ್ ಅಧ್ಯಕ್ಷ ದೇವಾನಂದನಾಯ್ಕ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಸತ್ಯನಾರಾಯಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್‌ಕುಮಾರ್, ಪತಂಜಲಿ ಯೋಗ ಸಮಿತಿ ಜಿಲ್ಲಾ ಕಾರ್ಯದರ್ಶಿ ಗುರುಮೂರ್ತಿ, ಉಪಾಧ್ಯಕ್ಷೆ ಲಲಿತಾ ಬೇದ್ರೆ, ನವೀನ, ಕೆಂಚವೀರಪ್ಪ, ರಾಮನರೇಶ್, ಕೃಷ್ಣಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net