ಯೋಗದಿಂದ ಸ್ಮರಣ ಶಕ್ತಿ ಹೆಚ್ಚಳ

Sharanbasav school
Published on

ಬೀದರ್: ನಿತ್ಯ ಯೋಗ ಮತ್ತು ಶಿಸ್ತುಬದ್ಧ ಜೀವನ ಕ್ರಮದಿಂದ ವಿದ್ಯಾರ್ಥಿಗಳು ಸ್ಮರಣ ಶಕ್ತಿ ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಹೇಳಿದರು.

ಗೋರನಳ್ಳಿ ಸಮೀಪದ ಶರಣಬಸವ ಪಬ್ಲಿಕ್ ಸ್ಕೂಲ್ ಹಾಗೂ ಶರಣಬಸವೇಶ್ವರ ವಿಜ್ಞಾನ, ವಾಣಿಜ್ಯ ಮತ್ತು ಕಲಾ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸ್ಮರಣ ಶಕ್ತಿ ಮತ್ತು ಸುಲಭ ಕಲಿಕಾ ತಂತ್ರಗಳ ಕುರಿತ ಕಾರ್ಯಾಗಾರ ಉದ್ಘಾಟಿಸಿದ ಅವರು, ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಶಿಕ್ಷಣ ಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಿಷಯ ಮನವರಿಕೆ ಮಾಡಿಕೊಡಲು ಸುಲಭ ಬೋಧನೆ, ಕಲಿಕಾ ತಂತ್ರಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು.

ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯೆ ಡಾ.ವಿನಿತಾ ಪಾಟೀಲ್ ಮಾತನಾಡಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶ್ರೀ ಡಾ.ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ, ಚಿರಂಜೀವಿ ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಮಾರ್ಗದರ್ಶನದಲ್ಲಿ ಶರಣಬಸವ ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ ಹೆಚ್ಚಿಸಲು ವಿವಿಧ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಪರೀಕ್ಷೆಗಳ ಪರಿಣತ ತರಬೇತುದಾರ ಡಾ.ಸಿ.ಎಸ್. ವೇಪಾ ಅವರು ಅಧ್ಯಯನ ವಿಧಾನ, ವಿಷಯ ನೆನಪಿನಲ್ಲಿ ಇಟ್ಟುಕೊಳ್ಳುವುದು ಹೇಗೆ? ಎಸ್ಸೆಸ್ಸೆಲ್ಸಿ-ಪಿಯುಸಿ, ಸ್ಪರ್ಧಾತ್ಮಕ ಪರೀಕ್ಷೆ, ಸಂದರ್ಶನ ಎದುರಿಸುವ ಬಗೆ ಸೇರಿ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net