ಯೋಗಿ ಪ್ರಚಾರ ಸಭೆ ಮುಂದೂಡಿಕೆ

Yogi adityanath
Published on

ಬೀದರ್: ರಾಜ್ಯ ವಿಧಾನಸಭೆ ಚುನಾವಣೆ ಪ್ರಯುಕ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಏ.30 ರಂದು ಸಂಜೆ 5ಕ್ಕೆ ನಿಗದಿಪಡಿಸಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಬೀದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ಹಾಗೂ ಕ್ಷೇತ್ರದ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net