ಯೋಗೀಶಗೌಡ ಗೌಡರ ಕೊಲೆ ಪ್ರಕರಣ, ಸಿಬಿಐನಿಂದ ಮತ್ತೆ ಹಲವರ ವಿಚಾರಣೆ

YOGISH GOWDA
Published on

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯನಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ತನಿಖೆ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ನಗರದಲ್ಲಿ ಬೀಡು ಬಿಟ್ಟಿರುವ ಸಿಬಿಐ ಅಧಿಕಾರಿಗಳು ಮಾಹಿತಿ ಶೋಧವನ್ನು ಚುರುಕುಗೊಳಿಸಿದ್ದಾರೆ.

2 ದಿನಗಳ ಕಾಲ ಗುಪ್ತವಾಗಿ ವಿಚಾರಣೆ ನಡೆಸಿರುವ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ, ಬುಧವಾರ ಇಲ್ಲಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಸೇರಿ ಇನ್ನೂ ಕೆಲವರ ವಿಚಾರಣೆ ನಡೆಸಿದರು. ಮಧ್ಯಾಹ್ನ ಹೊತ್ತಿನಲ್ಲಿ, ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ಶಂಕರಗೌಡ ಪಾಟೀಲ, ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಸಹಚರರಾದ ವಿಕಾಸ ಕಲಬುರ್ಗಿ, ಸ್ಯಾಂಡಿ ಅಲಿಯಾಸ್ ಸಂದೀಪ ಸವದತ್ತಿ, ಶಿಗ್ಗಾಂವಿ ಕಾಂಗ್ರೆಸ್ ಮುಖಂಡನೊಬ್ಬನನ್ನು ಕರೆಯಿಸಿ ಅನೇಕ ಪ್ರಶ್ನೆ ಕೇಳಿ ಉತ್ತರ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.</

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net