

ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನರೇಗಾ ಯೋಜನೆ ಗ್ರಾಮೀಣ ಭಾಗದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಅಕಾರಿ ವರ್ಗ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಶಾಸಕ ವೆಂಕಟರಡ್ಡಿ ಮುದ್ನಾಳ್ ಸಲಹೆ ನೀಡಿದರು.
ಸೋಮವಾರ ಇಲ್ಲಿನ ತಾಪಂ ಕಚೇರಿ ಸಭಾಂಗಣದಲ್ಲಿ ನರೇಗಾ ಯೋಜನೆಯಡಿಯ ಕಾಮಗಾರಿಗಳ ಯಶೋಗಾಥೆಯ ಕಿರುಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿ, ಗ್ರಾಮೀಣ ಜನರು ಉದ್ಯೋಗ ಅರಸಿ ದೊಡ್ಡ ನಗರಗಳಿಗೆ ಗುಳೆ ಹೋಗದಂತೆ ತಡೆಯಲು ಸಕರ್ಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಇದು ದೇಶದ ಕೋಟ್ಯಾಂತರ ಜನರ ಬದುಕನ್ನು ಹಸನುಗೊಳಿಸಿದೆ ಎಂದರು.
ಯಾದಗಿರಿ ಕ್ಷೇತ್ರದಲ್ಲಿ ನಾನೂ ಸಹ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಕಲ್ಯಾಣ ಇಲಾಖೆ ಹಾಗೂ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಂಡಿದ್ದೇನೆ. ಹಳ್ಳಿಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡಲು 3 ಕೋಟಿ ಅನುದಾನ ನೀಡಲಾಗಿದೆ. ಸ್ಥಳೀಯ ಮಟ್ಟದಲ್ಲಿ ಜನಪ್ರತಿ ನಿಗಳ ಜತೆ ಅಕಾರಿಗಳು ಚಚರ್ಿಸಿ ನಿವೇಶನ ಪಡೆದು ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.
ನರೇಗಾದಡಿ ಕಾಮಗಾರಿಗಳನ್ನು ಗ್ರಾಮೀಣ ಭಾಗದಲ್ಲಿ ತೆಗೆದುಕೊಳ್ಳಲು ಅನುದಾನದ ಕೊರತೆ ಇಲ್ಲ. ಗ್ರಾಪಂ ಅಭಿವೃದ್ಧಿ ಅಕಾರಿಗಳು ಕೂಲಿ ಕೆಲಸ ಕೇಳೀದ ಪ್ರತಿಯೊಬ್ಬರಿಗೂ ಜಾಬಕಾಡ್‍್ ನೀಡಬೇಕು. ನಮ್ಮ ಹೊಲ, ನಮ್ಮ ದಾರಿ, ಕೃಷಿ ಹೊಂಡ ಇನ್ನಿತರ ಕಾಮಗಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಂಡು ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.
ಹಳ್ಳಿಗಳು ತ್ವರಿತಗತಿಯಲ್ಲಿ ಅಭಿವೃದ್ಧಿ ಹೊಂದಬೇಕು ಎಂಬ ನಿಟ್ಟಿನಲ್ಲಿ ಅಕಾರ ವಿಕೇಂದ್ರೀಕರಿಸಿ, ಗ್ರಾಪಂ ಮೂಲಕ ಸಕರ್ಾರ ಕೋಟ್ಯಾಂತರ ರೂ.ಅನುದಾನ ನೀಡುತ್ತಿದೆ. ಪಿಡಿಒಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಕಾಮಗಾರಿಗಳ ಬಗ್ಗೆ ಹಾಗೂ ನರೇಗಾ ಯೋಜನೆಯ ಬಗ್ಗೆ ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.