ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ

IMG-20230811-WA0189_1
Published on

ಸಾಲಿಗ್ರಾಮ: ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮತದಾರರಿಗೆ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮದಲ್ಲಿ ತುರ್ತಾಗಿ ಆಗಬೇಕಾದ ಅಭಿವೃದ್ಧಿ ಕೆಲಸ, ಕಾರ್ಯಗಳನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.

ಗ್ರಾಮದಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳು, ಚರಂಡಿಗಳು ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಲಕ್ಷ್ಮೀಪುರ ಗ್ರಾಮಕ್ಕೆ ಬರುವ ಮುಖ್ಯರಸ್ತೆಗಳು ಹಲವು ವರ್ಷಗಳಿಂದ ಹದಗೆಟ್ಟಿದ್ದು, ಸಂಚಾರಕ್ಕೆ ತೊಂದರೆ ಆಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಅನುದಾನ ತರುವ ಮೂಲಕ ಅಭಿವೃದ್ಧಿ ಮಾಡಲಾಗುವುದು ಎಂದರು.

ಲಕ್ಷ್ಮೀಪುರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಡಿ.ರವಿಶಂಕರ್ ಅವರನ್ನು ಅಭಿನಂದಿಸಿದರು. ಸಾಲಿಗ್ರಾಮ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್‌ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಣ್ಣಪ್ಪ, ಅಂಕನಹಳ್ಳಿ ಗೋವಿಂದೇಗೌಡ, ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಸೈಯದ್ ಶೌಕತ್, ಸೈಯದ್, ಪಾಪಣ್ಣ, ಹುಚ್ಚೇಗೌಡ, ನಾಗೇಂದ್ರ, ಹರೀಶ್, ಶಿವಣ್ಣ, ರಾಜೀವ್ ಗಾಂಧಿ ಪಂಚಾಯತ್ ಸಮಿತಿಯ ತಾಲೂಕು ಉಪಾಧ್ಯಕ್ಷ ಮುತ್ತಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net