ರಂಗ ಪ್ರಶಸ್ತಿ ಪ್ರದಾನ 18ರಂದು

Dr.Sujata Jangamshetty
Published on

ಕಲಬುರಗಿ: ರಂಗ ಸಂಗಮ ಕಲಾ ವೇದಿಕೆಯಿಂದ ನೀಡುವ ರಾಜ್ಯಮಟ್ಟದ ರಂಗ ಪ್ರಶಸ್ತಿ' ಪ್ರದಾನ ಕಾರ್ಯಕ್ರಮ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಜು.೧೮ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಡಾ.ಸುಜಾತಾ ಜಂಗಮಶೆಟ್ಟಿ ಮಾಹಿತಿ ನೀಡಿದರು. ೧೧ ವರ್ಷದಿಂದ ನಿರಂತರವಾಗಿ ರಂಗ ಕಲೆಯಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯಮಟ್ಟದರಂಗ ಪ್ರಶಸ್ತಿ' ಪ್ರದಾನ ಮಾಡಲಾಗುತ್ತಿದೆ. ಬಳ್ಳಾರಿಯ ಪುರುಷೋತ್ತಮ ಹಂದ್ಯಾಳ ಅವರಿಗೆ ಶ್ರೀ ಎಸ್.ಬಿ.ಜಂಗಮಶೆಟ್ಟಿ ರಂಗ ಪ್ರಶಸ್ತಿ' ಹಾಗೂ ಹಾವೇರಿಯ ರಾಧಿಕಾ ವಿ. ಬೇವಿನಕಟ್ಟಿ ಅವರಿಗೆಶ್ರೀಮತಿ ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿ' ಪ್ರದಾನ ಮಾಡಲಾಗುವುದು ಎಂದು ಸೋಮವಾರ ತಿಳಿಸಿದರು.
ಪ್ರಶಸ್ತಿಯೂ ತಲಾ ೧೦ ಸಾವಿರ ರೂ. ಹೊಂದಿದೆ. ಸೇಡಂನ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಅಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ ಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್.ಬಿ.ಜಂಗಮಶೆಟ್ಟಿ ಹಾಗೂ ಸುಭದ್ರಾದೇವಿ ಜಂಗಮಶೆಟ್ಟಿ ಕುರಿತು ಮಹಾದೇವ ಎಂ. ಹಂಗರಗಿ ಮಾತನಾಡಲಿದ್ದಾರೆ. ರಂಗ ಸಂಗಮ ಕಲಾ ವೇದಿಕೆ ಅಧ್ಯಕ್ಷೆ ಶಿವಗೀತಾ ಬಸವಪ್ರಭು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು. ವಿಶ್ವಾರಾಧ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net