ರಂಗೇನಹಳ್ಳಿ ಗ್ರಾಪಂಗೆ ಲೋಕಾಯುಕ್ತ ತಂಡ

17 TKE 3(1) web
Published on

ತರೀಕೆರೆ: ಲೋಕಾಯುಕ್ತ ಡಿವೈಎಸ್ಪಿ ಜೆ.ಜೆ.ತಿರುಮಲೇಶ್ ನೇತೃತ್ವದ ತಂಡ ಶನಿವಾರ ರಂಗೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ 2007ರಿಂದ 2012ನೇ ಸಾಲಿನವರೆಗೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿತು. ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲೂ ಕಾಮಗಾರಿಯ ಪರಿಶೀಲನಾ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಗಿದೆ. ಕಳೆದ 5 ವರ್ಷಗಳಲ್ಲಿ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ಕೈಗೊಳ್ಳಲಾಗಿರುವ 15 ಸಾವಿರ ಕಾಮಗಾರಿಗಳನ್ನು ಹಂತ ಹಂತವಾಗಿ ಪರಿಶೀಲಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಜೆ.ತಿರುಮಲೇಶ್ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net