

ಬಾಗಲಕೋಟೆ: ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ರಂಗೋಲಿ ಬಿಡಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿಗಾಗಿ ರಂಗೋಲಿ ಬಿಡಿಸುವ ಕಾರ್ಯ ಮಾಡಲಾಯಿತು. ನಮ್ಮ ಮತ ನಮ್ಮ ಹಕ್ಕು, ತಪ್ಪದೇ ಮತದಾನ ಮಾಡಿ, ಓಟ ಪಾರ್ ಎ ಬೆಟರ್ ಇಂಡಿಯಾ, ವಿಜಿಲಂಟ್, ಸೇಪ್ ಇಎಂವಿ ಕುರಿತು ರಂಗೋಲಿ ಬಿಡಿಸುವ ಮೂಲಕ ಜಾಗೃತಿ ಮೂಡಿಸಲಾಯಿತು. ಮುಖ್ಯ ದ್ವಾರದ ವರೆಗೆ ಮತದಾನ ಜಾಗೃತಿಯ ವಿವಿಧ ಘೋಷಣೆಗಳನ್ನು ರಂಗೋಲಿಯಲ್ಲಿ ಬಿಡಿಸಲಾಗಿತ್ತು.
ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮತದಾನ ಜಾಗೃತಿಯ ರಂಗೋಲಿ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಶಶಿಕಾಂತ ಶಿವಪೂರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಜಿಲ್ಲಾ ನಿರೂಪಣಾಧಿಕಾರಿ ಅಮರೇಶ ಎಚ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ರಮೇಶ ಸೂಳಿಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.