

ಚಿತ್ರದುರ್ಗ: ನಗರದ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್‌ನಿಂದ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ಜ.12ರ ಬೆಳಗ್ಗೆ 11ಕ್ಕೆ ರಂ ಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಗೆ ಒಂದು ಗಂಟೆ ಕಾಲಾವಶ ನಿಗದಿ ಮಾಡಲಾಗಿದೆ. 18 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕಲ್ಪನಾಪಾಲ(7975725897)ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.