ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಪುಷ್ಪರಾಜ್, ಸಾಮಾನ್ಯ ಜನರಿಗೆ ರಕ್ತದಾನ ಶಿಬಿರದ ಅನುಕೂಲವಾಗುವ ದೃಷ್ಠಿಯಿಂದ ಲಯನ್ಸ್ ಸಂಸ್ಥೆ ಈ ಕಾರ್ಯಕ್ರಮ ಆಯೋಜಿಸಿದೆ. ಮುಂದೆ ಸರ್ಕಾರದ ಸೇವಾ ಕಾರ್ಯಗಳಿಗೆ ಲಯನ್ಸ್ ಸಂಸ್ಥೆ ಸದಾ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಸಿವಿಲ್ ಇಂಜಿನಿಯರ್ಸ್ ಸಂಘದ ಅಧ್ಯಕ್ಷ ಜಿ. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಚಿಕ್ಕಮಗಳೂರು ಲಯನ್ಸ್ ಸಂಸ್ಥೆ ಕಳೆದ ಅವಧಿಯಲ್ಲಿ ೫೦೦ ಯೂನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ರಕ್ತನಿಧಿ ಕೇಂದ್ರಕ್ಕೆ ನೀಡಿತ್ತು. ಮುಂದೆ ಅಧ್ಯಕ್ಷರಾಗುವ ಸಿ.ಎನ್. ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಇನ್ನೂ ೫೦೦ ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಸುನಿಲ್‌ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರೂಪಾ ಜೈನ್, ಹೋಲಿಕ್ರಾಸ್ ಆಸ್ಪತ್ರೆಯ ಹಿರಿಯ ಪ್ರಯೋಗಾಲಯ ತಜ್ಞೆ ಲಿಲ್ಲಿ ಪೆರಿಸ್ ಸಮಾರಂಭದಲ್ಲಿ ಮಾತನಾಡಿ ಲಯನ್ಸ್ ಸಂಸ್ಥೆ ಮತ್ತು ಸಿವಿಲ್ ಇಂಜಿನಿರ‍್ಸ್ ಸಂಘದ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.
ಚಿಕ್ಕಮಗಳೂರು ನಗರದಲ್ಲಿ ಇರುವ ಮೆಡಿಕಲ್ ಕಾಲೇಜಿನ ಸುಮಾರು ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ರೈತ ಸಂಘದ ೧೫ ಮಂದಿ ಪದಾಧಿಕಾರಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ್ದು ಇಲ್ಲಿ ವಿಶೇಷವಾಗಿತ್ತು.
ಸಿವಿಲ್ ಇಂಜಿನಿಯರ್ ಸಂಘದ ಅಧ್ಯಕ್ಷ ಜಿ. ರಮೇಶ್ ಸ್ವಾಗತಿಸಿದರು, ರಕ್ತದಾನ ಶಿಬಿರದ ಸಂಯೋಜಕಿ ಲಯನ್ಸ್ ನಜ್ಮಾ ಆಲಿ ವಂದಿಸಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೋಪಿಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಸಂಸ್ಥೆಯ ವಲಯಾಧ್ಯಕ್ಷ ಬಿ.ಎನ್. ವೆಂಕಟೇಶ್, ಹಿರಿಯ ಲಯನ್ಸ್ ಸದಸ್ಯ ಎಸ್.ಆರ್. ವೈದ್ಯ, ಲಯನ್ಸ್ ಉಪಾಧ್ಯಕ್ಷ ಸಿ.ಎನ್. ಕುಮಾರ್, ಖಜಾಂಚಿ ಗಿರೀಶ್ ಮತ್ತು ಶಿವಣ್ಣ ಸಮಾರಂಭದಲ್ಲಿ ಉಪಸ್ಥಿತರಿದ್ದರು.