ರಕ್ತದ ಗುಂಪು ಮಾಹಿತಿ ಅಗತ್ಯ

BRM blood test 12a (2)
Published on

ಭರವಸಾಗರ: ಪ್ರತಿಯೊಬ್ಬರು ತಮ್ಮ ರಕ್ತದ ಗುಂಪು ತಿಳಿದುಕೊಂಡು, ಮತ್ತೊಬ್ಬರಿಗೆ ತಿಳಿಯುವ ರೀತಿ ದಾಖಲಿಸುವುದು ಅನಿವಾರ್ಯವಾಗಿದೆ ಎಂದು ಪ್ರಾಚಾರ್ಯೆ ಡಾ.ಎಸ್.ಶಶಿಕಲಾ ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜು ಗುರುವಾರ ಏರ್ಪಡಿಸಿದ್ದ ರಕ್ತದ ಗುಂಪಿನ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಲೋಕೇಶ್ ನಾಯ್ಕ, ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕಿ ಕೆ.ಸೌಮ್ಯಾ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ನಿರ್ದೆಶಕ ಡಾ.ಧನಂಜಯ ಮೂರ್ತಿ, ಸಂಯೋಜನಾಧಿಕಾರಿ ಶಿವಕುಮಾರ್, ಜ್ಯೋತಿ, ಗಿರೀಶ್, ಪದ್ಮಾ, ಚಂದ್ರಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net