ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ

Published on

ಹುಬ್ಬಳ್ಳಿ: ವಿದ್ಯಾಮಂದಿರ ಶಿಕ್ಷಣ ಸಾಮಾಜಿಕ ಟ್ರಸ್ಟ್ ಸಹಯೋಗದಲ್ಲಿ ಸೇವಾಭಾರತಿ ಟ್ರಸ್ಟ್ ಹಾಗೂ ಶಾ ದಾಮಜಿ ಜಾಧವಜಿ ಛೇಡಾ ಸ್ಮಾರಕ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ವತಿಯಿಂದ ನ. 24ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಳೇ ಹುಬ್ಬಳ್ಳಿಯ ನೇಕಾರ ನಗರದ ಅಮರಜ್ಯೋತಿ ಶಾಲೆಯಲ್ಲಿ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಇದೇ ವೇಳೆ ಶೀತ, ಕೆಮ್ಮು, ಜ್ವರ, ಮಧುಮೇಹ, ರಕ್ತದೊತ್ತಡ ಸೇರಿ ವಿವಿಧ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ ಹಾಗೂ ಔಷಧ ವಿತರಣೆ ಮಾಡಲಾಗುವುದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net