ರಕ್ತದಾನ ಎಲ್ಲಕ್ಕಿಂತ ಶ್ರೇಷ್ಠ ದಾನ

30 Hulsur 1
 ಹುಲಸೂರಿನ ಗುರುಬಸವೇಶ್ವರ ಸಂಸ್ಥಾನ ಮಠದ ಶ್ರೀ ಶಿವಾನಂದ ಸ್ವಾಮೀಜಿ ಅವರ ಜನ್ಮದಿನದ ನಿಮಿತ್ತ ಶನಿವಾರ ಏರ್ಪಡಿಸಿದ್ದ ಶಿಬಿರದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಲತಾ ಹಾರಕೂಡೆ ರಕ್ತದಾನ ಮಾಡಿದರು. ಶ್ರೀ ಡಾ.ಶಿವಾನಂದ ಸ್ವಾಮೀಜಿ, ಓಂಕಾರ ಪಟ್ನೆ , ಪ್ರಕಾಶ ಕುದರಿ, ಆಕಾಶ ಖಂಡಾಳೆ ಇತರರಿದ್ದರು.
Published on

ಹುಲಸೂರು: ಇನ್ನೊಬ್ಬರ ಪ್ರಾಣ ಉಳಿಸುವ ರಕ್ತದಾನ ಎಲ್ಲ ದಾನಗಳಲ್ಲೂ ಶ್ರೇಷ್ಠವಾಗಿದೆ. ರಕ್ತದಾನದ ಮಹತ್ವದ ಬಗ್ಗೆ ಜನರಲ್ಲಿ ಅರಿವು, ಜಾಗೃತಿ ಮೂಡಿಸಬೇಕು. ರಕ್ತದಾನ ಮಾಡಿ ಇನ್ನೊಂದು ಜೀವ ಉಳಿಸಿದರೆ ನಿಮಗೆ ಪುಣ್ಯದ ಫಲ ದೊರೆಯುತ್ತದೆ ಎಂದು ಶ್ರೀ ಡಾ.ಶಿವಾನಂದ ಸ್ವಾಮೀಜಿ ನುಡಿದರು.

ಅಲ್ಲಮಪ್ರಭು ಶೂನ್ಯ ಪೀಠ ಅನುಭವ ಮಂಟಪ ಪರಿಸರದಲ್ಲಿ ಶ್ರೀ ಡಾ. ಶಿವಾನಂದ ಸ್ವಾಮೀಜಿ ಅವರ ಜನ್ಮದಿನದ ನಿಮಿತ್ತ ಶನಿವಾರ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವಕರು ಯಾವುದೇ ಸಂಕೋಚವಿಲ್ಲದೆ ರಕ್ತದಾನ ಮಾಡಿ ರೋಗದಿಂದ ಬಳಲುವ ಅಮೂಲ್ಯ ಜೀವವನ್ನು ಉಳಿಸಬಹುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪ್ರಾಧಕಾರದ ಅಧೀನ ಕಾರ್ಯದರ್ಶಿ ಹಾಗೂ ಬಸವಕಲ್ಯಾಣ ತಾಲೂಕು ಉಸ್ತುವಾರಿ ಅಧಿಕಾರಿ ಪ್ರಕಾಶ ಕುದರಿ ಮಾತನಾಡಿ, ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆವಿರುತ್ತದೆ. ಅದು ಕೃತಕ ಉತ್ಪಾದನೆ ಸಾಧ್ಯವಿಲ್ಲದ ಕಾರಣಕ್ಕೆ ರಕ್ತದಾನಿಗಳಿಂದಲೇ ಸಂಗ್ರಹಿಸಬೇಕು. ಹೀಗಾಗಿ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವುದಕ್ಕೆ ಮುಂದಾಗಬೇಕು ಎಂದರು.

ತಹಸೀಲ್ದಾರ್ ಶಿವಾನಂದ ಮೇತ್ರೆ, ಜಿಪಂ ಮಾಜಿ ಸದಸ್ಯ ಸುಧೀರ ಕಾಡಾದಿ, ಸಾಮಾಜಿಕ ಕಾರ್ಯಕರ್ತ ಆಕಾಶ ಖಂಡಾಳೆ ಮಾತನಾಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷೆ ಲತಾ ಹಾರಕೂಡೆ ಸೇರಿ ಅನೇಕರು ರಕ್ತದಾನ ಮಾಡಿದರು. ಶಿಬಿರದಲ್ಲಿ ೫೫ ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನ ಮಾಡಿದವರಿಗೆ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಹಣ್ಣು ಹಂಪಲು ವಿತರಿಸಲಾಯಿತು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಓಂಕಾರ ಪಟ್ನೆ, ಪ್ರೊ.ಆಕಾಶ ಖಂಡಾಳೆ, ಅಧಿಕಾರಿಗಳಾದ ದಿಲೀಪ ಉತ್ತಮ, ಶಿವರಾಜ, ವಿ.ಬಿ.ಹಿರೇಗೌಡರ, ಶಿವಕುಮಾರ ಬಿರಾದಾರ, ಪ್ರಮುಖರಾದ ಗುಲಾಟ್ ಶೇಕ್, ಭೀಮಾಶಂಕರ ಅದೆಪ್ಪ, ನಾಗರಾಜ ಹಾವಣ್ಣ, ಸಚಿನ ಕೌಟೆ, ಶಿವರಾಜ ಚಕೋತೆ, ರಾಜಕುಮಾರ ತೊಂಡಾರೆ, ಎಚ್‌ಡಿಎಫ್‌ಸಿ ಬ್ಯಾಂಕ್ ವ್ಯವಸ್ಥಾಪಕ ಸನ್ನಿ ಶಂಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net