ರಕ್ತದಾನ ಮಾಡಿ ಜೀವ ಉಳಿಸಿ

KDR blood
ಕಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್, ಡಾ. ಕೆ.ಎ.ರಾಜಣ್ಣ, ಡಾ. ಮುರಳಿ, ಸಂಪತ್‌ಕುಮಾರ್, ನಾಗೇಶ್ ಇತರರಿದ್ದರು.
Published on

ಕಡೂರು: ಯುವ ಜನತೆ ರಕ್ತದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಮತ್ತು ರಕ್ತ ಗುಂಪು ಪರೀಕ್ಷೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಅಪಘಾತ ಇತರ ತುರ್ತು ಸಂದರ್ಭಗಳಲ್ಲಿ ರೋಗಿಗೆ ರಕ್ತದ ಅವಶ್ಯಕತೆ ಹೆಚ್ಚಿರಲಿದೆ. ಆ ಸಮಯದಲ್ಲಿ ರೋಗಿಯ ಪಾಲಿಗೆ ಪ್ರತಿ ನಿಮಿಷವೂ ಅಮೂಲ್ಯವಾಗಿದ್ದು, ರಕ್ತದ ಕೊರತೆ ತಪ್ಪಿಸಲು ಯುವಸಮೂಹ ಶಿಬಿರಗಳ ಮೂಲಕ ರಕ್ತದಾನಕ್ಕೆ ಹೆಚ್ಚು ಒತ್ತು ನೀಡಬೇಕಿದೆ ಎಂದರು. ಕಾಲೇಜು ಪ್ರಾಚಾರ್ಯ ಡಾ. ಕೆ.ಎ.ರಾಜಣ್ಣ ಮಾತನಾಡಿ, ರಕ್ತದಾನದಿಂದ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ. ಬದಲಾಗಿ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು. 40 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಡಾ. ಮುರಳಿ, ವೈ.ಜಿ.ಸಂಪತ್‌ಕುಮಾರ್, ಎಸ್.ಬಿ.ಮಂಜುನಾಥ್, ನಾಗೇಶ್, ಮಾರಣ್ಣ, ಕುಮಾರ್, ತಿಮ್ಮರಾಜು, ಎಸ್.ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net