ರಕ್ತದಾನದಿಂದ ನವಚೈತನ್ಯ

26 YERRISWAMY 06
Published on

ಬಳ್ಳಾರಿ : ರಕ್ತದಾನಕ್ಕಿಂತ ದೊಡ್ಡ ದಾನ ಮತ್ತೊಂದಿಲ್ಲ. ಮಾನವಿಯತೆಗಾಗಿ ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಎಂದು ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ಧರಾಜು ಚಂದ್ರಪ್ಪ ಹೇಳಿದರು.
ಇಲ್ಲಿಯ ವಿಎಸ್‌ಕೆ ವಿವಿಯಲ್ಲಿ 15ನೇ ಸಂಸ್ಥಾಪನಾ ದಿನದ ಪೂರ್ವ ದಿನದಂದು ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ,
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟ್ರಿಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕಲ್ಯಾಣ ಘಟಕ ವತಿಯಿಂದ ಆಯೋಜಿಸಲಾಗಿದ್ದ ಸ್ವಯಂ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನ ಮಹಾದಾನ, ನಮ್ಮ ರಕ್ತದಾನವು ಒಬ್ಬರ ಜೀವವನ್ನು ಉಳಿಸುತ್ತದೆ. ಒಬ್ಬ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಎಂದರು.
ವಿಮ್ಸ್ ನಿರ್ದೇಶಕ ಡಾ. ಗಂಗಾಧರಗೌಡ ಮಾತನಾಡಿ, ಇಂದಿನ ದಿನಗಳಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಶಸ್ತ ಚಿಕಿತ್ಸೆ, ಮಹಿಳೆ ಹಾಗೂ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವ ರೋಗಿಗಳಿಗೆ ಅವಶ್ಯಕವಾಗಿದೆ. ಕಾಲಕಾಲಕ್ಕೆ ರಕ್ತದಾನ ಮಾಡುವುದರಿಂದ ಆರೋಗ್ಯ ಸಮತೋಲನವಾಗಿರಲು ಸಹಾಯಕವಾಗುತ್ತದೆ ಎಂದರು.
ವಿವಿಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ 150ಕ್ಕೂ ಹೆಚ್ಚು ರಕ್ತದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net