

ಹುಬ್ಬಳ್ಳಿ: ಪರಿಸರ ಸ್ನೇಹಿ ಗಣೇಶ ಮೂರ್ತಿ ಪೂಜಿಸಲು ಪ್ರೋತ್ಸಾಹ ನೀಡುತ್ತಿರುವ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಅವರಿಗೆ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಭಿನಂದನಾ ಪತ್ರ ಬರೆದಿದ್ದಾರೆ. ರಜತ ಉಳ್ಳಾಗಡ್ಡಿಮಠ ಪ್ರತಿಷ್ಠಾನ ಮಾಡುತ್ತಿರುವ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ. ಪ್ರಕೃತಿ, ಪರಿಸರ ಉಳಿಸೋಣ, ಭವಿಷ್ಯದ ಪೀಳಿಗೆಗೆ ಸುಂದರ ಭೂಮಿ ಕಟ್ಟಿಕೊಡೋಣ ಎಂದು ಸಚಿವರು ಸಲಹೆ ನೀಡಿದ್ದಾರೆ.