

ಹಿರಿಯೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ಮಹಿಳಾ ಸಬಲೀಕರಣಕ್ಕೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ತುಳಸಿ ನಾರಾಯಣರಾವ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ್ಲ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಆರ್ಥಿಕ ಸಬಲೀಕರಣ ಕುಟುಂಬ ಮತ್ತು ಸಮಾಜದಲ್ಲಿ ಮಹಿಳೆಯ ಸ್ಥಾನವನ್ನು ಬಲಪಡಿಸುತ್ತದೆ. ರಾಜ್ಯದ ಅಭಿವೃದ್ಧಿಯ ಪಥದಲ್ಲಿ ಮಹಿಳೆಯರನ್ನು ಪ್ರಮುಖ ಶಕ್ತಿಯಾಗಿ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ, ಗೃಹ ಲಕ್ಷ್ಮಿ ಯೋಜನೆ ಮಹಿಳೆಯರ ಜೀವನವನ್ನು ಉತ್ತಮಗೊಳಿಸಲು ನೆರವಾಗಲಿದೆ ಎಂದರು.
ನಗರಸಭೆ ಪೌರಾಯುಕ್ತ ಎಚ್.ಮಹಂತೇಶ್, ಸದಸ್ಯರಾದ ಅಂಬಿಕಾ, ಮಮತಾ, ಈರಲಿಂಗೇಗೌಡ, ಸಣ್ಣಪ್ಪ, ಅಜ್ಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಜಿಪಂ ಮಾಜಿ ಸದಸ್ಯ ಆರ್.ನಾಗೇಂದ್ರ ನಾಯ್ಕ, ಕೆಪಿಸಿಸಿ ಸದಸ್ಯ ಸುರೇಶ್ ಬಾಬು, ಅಶೋಕ್, ಕಲ್ಲಹಟ್ಟಿ ಹರೀಶ್ ಇತರರಿದ್ದರು.