ರಮನಹಳ್ಳಿ ಪಟ್ಟಣ ಪಂಚಾಯಿತಿ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

20220105101105966
Published on

ಮೈಸೂರು: ರಮನಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ಜನರ ಮತ್ತು ಅಂಗವಿಕಲರ ಕಲ್ಯಾಣಕ್ಕಾಗಿ ವಿವಿಧ ವೈಯಕ್ತಿಕ ಸೌಲಭ್ಯ ಕಲ್ಪಿಸುವ ಉದ್ದೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಸೆ.15ರ ಒಳಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ರಮನಹಳ್ಳಿ ಪಟ್ಟಣ ಪಂಚಾಯಿತಿಯ ನಿವಾಸಿಯಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿಗಳ ಸ್ವಯಂ ದೃಢೀಕೃತ ನಕಲು ಪ್ರತಿ, ಇತ್ತೀಚಿನ 3 ಭಾವಚಿತ್ರ, ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗಾಗಿ ಸಂಬಂಧಪಟ್ಟ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ರಮನಹಳ್ಳಿ ಪಪಂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ ಬದಲಾವಣೆ: ಆಕ್ಷೇಪಣಾ ಅರ್ಜಿ ಆಹ್ವಾನ

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಚಾಮರಾಜ ವಿಧಾನಸಭಾ ಕ್ಷೇತ್ರ ಪಾಲಿಕೆ ವ್ಯಾಪ್ತಿಯ ನಗರ ಆಶ್ರಯ ವಸತಿ ಯೋಜನೆಯಡಿ ವಸತಿ ನಿವೇಶನಕ್ಕಾಗಿ 2000ರಿಂದ 2004ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರ ವಿಳಾಸದ ಬಗ್ಗೆ ಮಾಹಿತಿ ಪರಿಶೀಲನೆ ಮಾಡಲಾಗಿದೆ. 1258 ಜನರು ಸ್ಥಳಾಂತರಗೊಂಡು ವಿಳಾಸ ಬದಲಾವಣೆಯಾಗಿರುವುದು ಕಂಡುಬಂದಿದೆ. ಈ ಅರ್ಜಿದಾರರ ಪಟ್ಟಿಯನ್ನು ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಪ್ರದರ್ಶಿಸಲಾಗಿದೆ.

ಪಟ್ಟಿಗೆ ಸಂಬಂಧಿಸಿದಂತೆ ಅರ್ಜಿದಾರರಿಂದ ಆಕ್ಷೇಪಣೆ ಏನಾದರೂ ಇದ್ದಲ್ಲಿ ಪ್ರಕಟಣೆಯ 15 ದಿನಗಳೊಳಗಾಗಿ ಚಾಮರಾಜ ಆಶ್ರಯ ಶಾಖೆ ಚೆಲುವಾಂಬ ಪಾರ್ಕ್ ಮುಂಭಾಗ ಒಂಟಿಕೊಪ್ಪಲು ಮೈಸೂರು ಆಶ್ರಯ ಕಚೇರಿಗೆ ಖುದ್ದು ಹಾಜರಾಗಿ ಸಲ್ಲಿಸಬಹುದು. ಇದಕ್ಕಾಗಿ ಅಗತ್ಯ ದಾಖಲೆಗಳನ್ನು ಸೆ.12ರ ಒಳಗೆ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net